ಅಕ್ಷರಾಭ್ಯಾಸ ಮೂಲಕ ಪ್ರಾಥಮಿಕ ಶಿಕ್ಷಣ ಆರಂಭಿಸಿದ ಪುಟಾಣಿಗಳು

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ದುರ್ಗೆನಹಳ್ಳಿ ಬಳಿ ಇರುವ ನಂದಿ ಹಿಲ್ ವ್ಯೂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಗಣಪತಿ ಹೋಮ, ಶಾರದ ಪೂಜೆ ನಡೆಸಿ ಸಾಂಪ್ರದಾಯದಂತೆ ಮಕ್ಕಳಿಗೆ ಪೋಷಕರಿಂದ ಅಕ್ಷರಭ್ಯಾಸ ಮಾಡಿಸಲಾಯಿತು.

ಈ ವೇಳೆ ಶಾಲೆಯ ಕಾರ್ಯದರ್ಶಿ ಧನಂಜಯ ಮಾತನಾಡಿ, ಸಮಾಜದಲ್ಲಿ ಅಕ್ಷರಾಭ್ಯಾಸ ಕೆಲವೇ ವರ್ಗಗಳಿಗೆ ಸೀಮಿತವಾಗಿದ್ದು, ಶೃಂಗೇರಿ ಮಠ, ವಾರಣಾಸಿ, ವೈಷ್ಣೋದೇವಿ ದೇವಾಲಯಗಳಲ್ಲಿ ಮಾತ್ರ ಅಕ್ಷರಾಭ್ಯಾಸ ಮಾಡಲಾಗುತ್ತಿತ್ತು, ಕೆಲ ಪೋಷಕರು ಅಲ್ಲಿಗೆ ಹೋಗಿ ಅಕ್ಷರಾಭ್ಯಾಸ ಮಾಡಿಸುವುದು ಕಷ್ಟವಾಗಿತ್ತು, ಇದನ್ನು ಮನಗೊಂಡ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಅವರು ಸಾಂಪ್ರದಾಯಬದ್ಧವಾಗಿ ಅಕ್ಷರಾಭ್ಯಾಸ ಮಾಡಿಸಲಾಗಿದೆ. ಇದಕ್ಕೆ ಪೋಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ನಂತರ ಶಾಲೆಯ ಅಧ್ಯಕ್ಷ ವರಲಕ್ಷಿ ಮಾತನಾಡಿ, ಶಾಲಾ ಹಂತದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳು ರೂಢಿಸಿಕೊಳ್ಳುವುದು ಕೂಡ ಅಕ್ಷರಾಭ್ಯಾಸದ ಮೂಲ ಉದ್ದೇಶವಾಗಿದೆ. ಶಾಲೆಯಲ್ಲಿ ಗುರುಗಳ ಪಾಠ ಪ್ರವನಚನಗಳಿಂದ ಮಕ್ಕಳ ಅಭ್ಯುದಯವಾಗಲಿ ಎಂದು ಆಶಿಸಿದರು,

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಭಾವನಾ, ಬಾಬು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

1 hour ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

4 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

14 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

15 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

18 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

21 hours ago