Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11 ನೇ ವರ್ಷದ ಅದ್ಧೂರಿ ಗಣೇಶೋತ್ಸವ

ಕೋಲಾರ: ಜಿಲ್ಲೆಗೆ ಶಾಶ್ವತವಾದ ಶುದ್ದ ಕುಡಿಯುವ ನೀರಿಗಾಗಿ ಅಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ 11ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಸೆ 7 ರಿಂದ 15 ರವರಗೆ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ

ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸುಮಾರು 20 ಅಡಿ ಎತ್ತರ 15 ಅಡಿ ಅಗಲದ ವಿಶೇಷವಾದ ಗಣೇಶೋತ್ಸವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ ಶನಿವಾರದಂದು ಪ್ರಾರಂಭವಾಗಿ ಸೆ.15 ರಂದು ವಿಸರ್ಜನೆ ಮೂಲಕ ಕೊನೆಗೊಳ್ಳುತ್ತದೆ 9 ದಿನಗಳು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಗಳು ಗಣೇಶೋತ್ಸವ ಭಾಗವಾಗಿ ಸಮಿತಿಯ ಸದಸ್ಯರು ನಡೆಸಿಕೊಡಲಿದ್ದಾರೆ ಎಂದರು.

ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾಮಿಡಿಯನ್ ಮಿಮಿಕ್ರಿ ಗೋಪಿ ಸೇರಿದಂತೆ ಮಜಾಭಾರತ ತಂಡ, ಗಾಯಕ ರಾಜೇಶ್ ಕೃಷ್ಣನ್, ಅಥವಾ ಹೇಮಂತ್ ಕುಮಾರ್ ಅವರು ಭಾಗವಹಹಿಸಲಿದ್ದಾರೆ ಬಂಗಾರಪೇಟೆ ವೃತ್ತದಿಂದ ಡೂಂಲೈಟ್ ವೃತ್ತದ ವರೆಗೂ ರಂಗೋಲಿ ಸ್ಪರ್ಧೆ ನಡೆಲಿದೆ ಕೊನೆಯ ದಿನ ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಬ್ರಾಹ್ಮಣರ ಬೀದಿ ಹೊಸ ಬಸ್ ನಿಲ್ದಾಣ ಅಮ್ಮವಾರಿ ಪೇಟೆ ಕಾಲೇಜು ವೃತ್ತದ ಮಾರ್ಗವಾಗಿ ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ ಮೆರವಣಿಗೆ ದಕ್ಷಿಣ ರಾಜ್ಯಗಳ ಕಲಾ ತಂಡಗಳು ಸೇರಿದಂತೆ ಸ್ಥಳೀಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಸಾಧನೆಯನ್ನು ಗುರುತಿಸಿ ಪೋತ್ಸಾಹಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಇದರಿಂದಾಗಿ ಬೇರೆಯವರು ಸಾಧನೆ ಮಾಡಲು ಪೇರಣೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ‌

ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಪಲ್ಲವಿ ಮಣಿ, ನಾಮಲ್ ಮಂಜು, ಸಾ.ಮಾ.ಅನಿಲ್‍ ಬಾಬು, ಗಂಗಮ್ಮನಪಾಳ್ಯ ಚಂದ್ರನ್, ಹರೀಷ್, ಬಾಲು , ಚಂದ್ರಶೇಖರ್, ಶಶಿಧರ್, ಸಂತೋಷ್, ಮುರಳಿ, ವಿನಾಯಕ ಮುಂತಾದವರು ಇದ್ದರು

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

7 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago