ಅಗಲಿದ ಅಪ್ಪಯ್ಯಣ್ಣನವರಿಗೆ ಸಂತಾಪ ಸೂಚಿಸಿದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ನಮ್ಮ ಪಕ್ಷದ ಹಿರಿಯ ನಾಯಕರು, ಬಮೂಲ್ ಮಾಜಿ ಅಧ್ಯಕ್ಷರಾದ ಶ್ರೀ ಅಪ್ಪಯ್ಯಣ್ಣನವರು ಇನ್ನಿಲ್ಲ ಎಂಬ ಸುದ್ಧಿ ಮನಸ್ಸಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

ರಾಜಕಾರಣದ ಪ್ರತಿ ಹಂತದಲ್ಲೂ ನನಗೆ ಬೆಂಬಲವಾಗಿ ನಿಂತು ಮಾರ್ಗದರ್ಶನ ಮಾಡುತ್ತಿದ್ದ ಶ್ರೀಯುತರ ಅಗಲಿಕೆ ಪಕ್ಷಕ್ಕೆ ಮತ್ತು ವೈಯುಕ್ತಿಕವಾಗಿ ನನಗೆ ತುಂಬಲಾರದ ನಷ್ಟವಾಗಿದೆ.

ಭಗವಂತ ಅಗಲಿದ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇಂದು ಅಪ್ಪಯ್ಯಣ್ಣನವರ ಸಮಾಧಿ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿ ಶ್ರೀಯುತರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ, ಕುಟುಂಬವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಅದೇರೀತಿ ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ರಾಜಕಾರಣಿ ದಿವಂಗತ ಶ್ರೀ ಆರ್.ಎಲ್.ಜಾಲಪ್ಪ ಅವರ ಹಿರಿಯ ಪುತ್ರ ಮಾಜಿ ಶಾಸಕ ಶ್ರೀ ಜೆ.ನರಸಿಂಹಸ್ವಾಮಿ ನಿಧನರಾದ ವಿಷಯ ತಿಳಿದು ಅತ್ಯಂತ‌ ದುಃಖವಾಗಿದೆ.

ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *