ಅಗಲಿದ ಮಾಜಿ ಶಾಸಕ‌ ಜೆ.ನರಸಿಂಹಸ್ವಾಮಿ ಅವರಿಗೆ ದೊಡ್ಡಬಳ್ಳಾಪುರ ಕಸಾಪ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ನುಡಿನಮನ ಕಾರ್ಯಕ್ರಮ ಡಾ.ರಾಜ್ ಕಲಾಮಂದಿರದಲ್ಲಿ ನಡೆಯಿತು.

ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕಿನ ಅಭಿವೃದ್ದಿ ಕಾರ್ಯಗಳೊಂದಿಗೆ ಕನ್ನಡಪರವಾದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಸಹಕಾರ ಮತ್ತು ಪ್ರೋತ್ಸಾಹವನ್ನು ನೀಡುತ್ತಿದ್ದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರು ಕನ್ನಡ ಸಾಹಿತಿಗಳು ಮತ್ತು ಕಲಾವಿದರೊಂದಿಗೆ ನಿಕಟಸಂಪರ್ಕ ಹೊಂದಿದ್ದರು. ಜ್ಞಾನಪೀಠ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರದೊಂದಿಗೆ ಆತ್ಮೀಯ ‌ಒಡನಾಟವಿತ್ತು. ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡಪರ ಸಂಘಟನೆಗಳು ನಾಡು, ನುಡಿ, ಜಲ ಮುಂತಾದ ವಿಚಾರಗಳ ನಡೆಸುತ್ತಿದ್ದ ಸಭೆ, ಸಮಾರಂಭ ಮತ್ತು  ಪ್ರತಿಭಟನಾ ಕಾರ್ಯಕ್ರಮಗಳಲ್ಲೂ ಜೆ.ನರಸಿಂಹಸ್ವಾಮಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಜೆ.ನರಸಿಂಹಸ್ವಾಮಿ ಅವರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಮಗ್ರ ಪರಿಚಯವಿತ್ತು. ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಸಂಪೂರ್ಣ. ಸಹಕಾರ ನೀಡುತ್ತಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲು ಜೆ.ನರಸಿಂಹಸ್ವಾಮಿ ತಮ್ಮ ಪತ್ನಿ ಗಂಗಮ್ಮ ಅವರ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ದತ್ತಿ ನಿಧಿ‌ ನೀಡಿದರು. ಶ್ರೀಮತಿ ಗಂಗಮ್ಮ ಜೆ.ನರಸಿಂಹಸ್ವಾಮಿ ದತ್ತಿ ಎಂಬ ಹೆಸರಿನಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ‌ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ನುಡಿನಮನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಗೌರವ ಕಾರ್ಯದರ್ಶಿ ಜ್ಯೋತಿಕುಮಾರ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆವಂಗಲ ಹೋಬಳಿ ಘಟಕದ ಅಧ್ಯಕ್ಷ ಸಿ.ಮುನಿವೀರಪ್ಪ, ಪ್ರತಿನಿಧಿ ಸಫೀರ್, ಹಣಬೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಸಿ.ಅಣ್ಣಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕುಮಾರ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago