ಅಗಲಿದ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ

ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ಚಂದ್ರಗಿರಿ ತೀರದಲ್ಲಿ ಪುಸ್ತಕವನ್ನು ಬರೆದಿದ್ದಾರೆ. ಇವರು ತಮ್ಮ ಬರಹಗಳಲ್ಲಿ ಮುಸ್ಲಿಂನ ಕೆಲವು ಅರ್ಥಹೀನ ಸಂಪ್ರದಾಯಗಳನ್ನು ಕಟುವಾಗಿ ಟೀಕಿಸುತ್ತಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಾ ಅಬೂಬಕ್ಕರ್ ಹಲವಾರು ಕೃತಿಗಳನ್ನು ರಚಿಸಿದ್ದಾರೆ ಅವುಗಳಲ್ಲಿ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ, ತಳ ಒಡೆದ ದೋಣಿ, ಪಂಜರ ಪ್ರಮುಖವು, ಕಥಾ ಸಂಕಲನಗಳಾದ ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಸಹ ಜನರ ಹೃದಯ ಗೆದ್ದಿವೆ ಎನ್ನಬಹುದು.

ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌
ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು, ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ಸಾರಾ ಅಬೂಬಕ್ಕರ್ ನಿರಂತರವಾಗಿ ಪ್ರತಿಪಾದಿಸುತ್ತಿದ್ದರು.

ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ಓದಿನಲ್ಲಿ ಮಗ್ನರಾಗಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ.ಕ್ಯೂ.ಎ.ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾರಾಯಣಸ್ವಾಮಿ, ನಂದನ, ಕಚೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

7 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

7 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

8 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

9 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

14 hours ago