ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಸೌಕರ್ಯ, ಆಸನ ವ್ಯವಸ್ಥೆ, ಭದ್ರತಾ ಕ್ರಮಗಳು, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಪರೀಕ್ಷೆಯು ಸುಸೂತ್ರವಾಗಿ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಅಪರ ಜಿಲ್ಲಾಧಿಕಾರಿ ಸೈಯೀದಾ ಆಯಿಷಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…