
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸುಮಾರು 51 ಶಾಲೆಗಳಿಂದ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಿಂಡಕೂರು ತಿಮ್ಮನಹಳ್ಳಿ GHPS ಶಾಲೆಯ ವಿದ್ಯಾರ್ಥಿಗಳು ಆಯುಷ್ ರಾಜ್, ಲಿಖಿತ್ ಎಸ್, ರವಿತೇಜ ಸಹ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ. ವಿಜೇತರಿಗೆ 9,000/- ನಗದು ಬಹುಮಾನ, ಬ್ಯಾಗ್, ಲೇಖನ ಸಾಮಗ್ರಿಗಳು, ಪ್ರಶಸ್ತಿ ಪತ್ರಗಳನ್ನು ಬಹುಮಾನವಾಗಿ ಪಡೆದಿರುತ್ತಾರೆ.
ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, SDMC ಅಧ್ಯಕ್ಷರು, ಸದಸ್ಯರು, ಊರಿನ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿ ಪ್ರೋತ್ಸಾಹಿಸಿದ್ದಾರೆ..