ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ ಹೊರವಲಯದಲ್ಲಿರುವ ಡಾ. ಆನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಹಾಗೂ ಶಿಬಿರ ಕೇಂದ್ರದಲ್ಲಿ ಅಗ್ನಿ ಅವಘಡದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ ನಡೆಯಿತು.

ಸೆಪ್ಟೆಂಬರ್ 1ರಿಂದ 7ರವರೆಗೆ ಏಳು ದಿನಗಳ ಕಾಲ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಬೆಂಗಳೂರು ನಗರ ಹಾಗೂ ರಾಯಚೂರು ವಿಭಾಗದ ರೋವರ್ಸ್ ಮತ್ತು ರೇಂಜರ್ಸ್‌ಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವತಿಯಿಂದ ವಿವಿಧ ರೀತಿಯ ಅವಘಡಗಳು ಹಾಗೂ ವಿಪತ್ತುಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.

ದೊಡ್ಡಬಳ್ಳಾಪುರ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಮೇಶ್ ಮಾತನಾಡಿ, ನೈಸರ್ಗಿಕ ಅಥವಾ ಮಾನವ ನಿರ್ಮಿತ ಅವಘಡಗಳು ಸಂಭವಿಸಿದಾಗ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು, ಸಾರ್ವಜನಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ತರಬೇತಿ ನೀಡಲಾಗುತ್ತಿದೆ ಎಂದರು.

ಯುವ ಆಪ್ತಮಿತ್ರ ತರಬೇತಿಯ ರಾಜ್ಯ ಸಂಯೋಜಕಿ ಲತಾ ಮಂಜುನಾಥ್ ಮಾತನಾಡಿ, ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರೋವರ್ಸ್ ಮತ್ತು ರೇಂಜರ್ಸ್‌ಗಳು ಪ್ರಥಮ ಪ್ರತಿಸ್ಪಂದಕರಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ತರಬೇತಿಯಲ್ಲಿ ತಿಳಿಸಿಕೊಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಸಂಭವಿಸುವ ಅಗ್ನಿ ಅವಘಡ, ರಸ್ತೆ ಅಪಘಾತ, ನೆರೆ ಹಾಗೂ ಪ್ರವಾಹದಂತಹ ತುರ್ತು ಪರಿಸ್ಥಿತಿಗಳಲ್ಲಿ ಹೇಗೆ ಪ್ರತಿಕ್ರಿಯಿಸಬೇಕು, ಪರಿಸ್ಥಿತಿ ಗಂಭೀರವಾದಾಗ ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ಯಾವ ರೀತಿಯಲ್ಲಿ ಸಮನ್ವಯ ಸಾಧಿಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎಂದರು.

ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆಯ ತುರ್ತು ಸೇವೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಅಣಕು ಪ್ರದರ್ಶನದ ಮೂಲಕ ಶಿಬಿರಾರ್ಥಿಗಳಿಗೆ ವಿವರಿಸಲಾಯಿತು.

ಯುವ ಆಪ್ತಮಿತ್ರ ತರಬೇತಿ ಶಿಬಿರದ ಯಶಸ್ಸಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಘಟಕದ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರ ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ ಎಂದು ಲತಾ ಮಂಜುನಾಥ್ ತಿಳಿಸಿದರು.

ಅಪಘಾತದ ದೃಶ್ಯ ಸೆರೆಹಿಡಿಯುವುದಕ್ಕಿಂತ ಜೀವ ಉಳಿಸಿ

ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ ಗಾಯಾಳು ಸಾವು–ಬದುಕಿನ ನಡುವೆ ಹೋರಾಡುತ್ತಿರುವ ಸಂದರ್ಭದಲ್ಲಿ ಫೋಟೋ, ವಿಡಿಯೋ ಮಾಡುವ ಬದಲು ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ಒದಗಿಸಬೇಕು. ಸಮೀಪದ ಆಂಬುಲೆನ್ಸ್‌ಗೆ ಕರೆ ಮಾಡಿ ಚಿಕಿತ್ಸೆ ದೊರಕುವಂತೆ ಮಾಡಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕಿ ಎಷ್ಟು ವೀಕ್ಷಣೆ ಅಥವಾ ಲೈಕ್ ಬಂದಿದೆ ಎಂಬುದಕ್ಕಿಂತ, ಸಾವು–ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಯ ಪ್ರಾಣ ಉಳಿಸುವುದೇ ನಿಜವಾದ ಮಾನವೀಯತೆಯ ಮೌಲ್ಯ ಎಂದು ಲತಾ ಮಂಜುನಾಥ್ ಹೇಳಿದರು.

ಅಣಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರ ನೀಡಿದರು. ಅಗ್ನಿಶಾಮಕ ಸಿಬ್ಬಂದಿಗಳಾದ ಅನಿಲ್ ಕುಮಾರ್, ಪ್ರಕಾಶ್ ಆರ್.ಪಿ., ಕಾರ್ತಿಕ್ ಬಿ.ಬಿ., ಲಕ್ಷ್ಮಣ್ ಡಿ.ಬಿ., ಕುಮಾರಸ್ವಾಮಿ, ರಾಜ್ಯ ತರಬೇತಿ ಕೇಂದ್ರದ ವಾರ್ಡನ್ ಚಂದ್ರು ಪಿ., ಯುವ ಆಪ್ತಮಿತ್ರ ಸಹಾಯಕರಾದ ವೆಂಕಟೇಶ್, ವಿನಯ್ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

24 minutes ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

20 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

24 hours ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago