ಅಗ್ನಿ ಅವಘಡ ವಿಚಾರ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ: ಸಾರ್ವಜನಿಕರಿಂದ ಮೆಚ್ಚುಗೆ

ನಗರದ ರಾಜಶ್ರೀ ಕಂಫರ್ಟ್ಸ್ ಸಮೀಪದ ರಸ್ತೆ ಬದಿಯ ಬೆಡ್ ಶೀಟ್ ಅಂಗಡಿ, ಟೀ ಅಂಗಡಿಯಲ್ಲಿ ಅಗ್ನಿ ಅವಘಡ ಆಗಿದ್ದು, ಸದ್ಯ ಬೆಂಕಿ‌ನಂದಿಸುವಲ್ಲಿ ಅಗ್ನಿಶಾಮಕ‌ ಸಿಬ್ಬಂದಿ ಯಶಸ್ವಿಯಾಗಿದೆ.

ಯಾವ ಕಾರಣಕ್ಕೆ ಬೆಂಕಿ‌ ಸ್ಪೋಟಗೊಂಡಿತು ಎಂಬ ನಿಖರ ಕಾರಣ ಇನ್ನೂ ತಿಳಿದುಬಂದಿರುವುದಿಲ್ಲ. ಮೇಲ್ನೋಟಕ್ಕೆ‌ ಪಕ್ಕದಲ್ಲೇ ಇದ್ದ ಟೀ ಅಂಗಡಿಯಲ್ಲಿದ್ದ ಎರಡು ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದರು.

ಬೆಂಕಿಯ ಕೆನ್ನಾಲಿಗೆಗೆ ಬೆಡ್ ಶೀಟ್ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ವ್ಯಾಪಾರಿಗಳು ಬಾಡಿಗೆ ಶೆಡ್ ಹಾಕಿಕೊಂಡು ಬೆಡ್ ಶೀಟ್ ವ್ಯಾಪಾರ ಮಾಡುತ್ತಿದ್ದರು. ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಬೆಡ್ ಶೀಟ್ಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ತ್ವರಿತ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

59 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

6 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago