ಇಂದು ಬೆಳ್ಳಂಬೆಳಗ್ಗೆ ವಿಲೇವಾರಿ ಘಟಕಗಳನ್ನು ಪರಿಶೀಲಿಸಲು ತೆರಳಿದ್ದ ಡಿಕೆ ಶಿವಕುಮಾರ್, ಅಚಾನಕ್ಕಾಗಿ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಸ್ವಚ್ಛತೆ, ಕ್ಯಾಂಟಿನ್ ಸಿಬ್ಬಂದಿ ಬಳಿ ಮೆನು ಕೇಳಿದ್ದು, ಅದಕ್ಕೆ ಸಿಬ್ಬಂದಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಏನೇನು ಅಡುಗೆ ಮಾಡುತ್ತಾರೆ ಎಂದು ವಿವರಣೆ ನೀಡಿದ್ದಾರೆ.
ನಂತರ ಅಲ್ಲಿಂದ ಬೆಂಗಳೂರಿನ ಸೀಗೇಹಳ್ಳಿಯಲ್ಲಿರುವ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು ಅದನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳು ನಡೆಯುತ್ತಿವೆ. ಈ ಕುರಿತು ಹಿಂದೆಯೂ ಕೂಡ ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಮಂಡಳಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿತ್ತು.