ಶುಕ್ರವಾರ ಪಾಕಿಸ್ತಾನದ ರಾವಲ್ಪಿಂಡಿಯ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ 27 ವರ್ಷದ ಮಹಿಳೆ ಆರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ಡಾನ್ ವರದಿ ಮಾಡಿದೆ.
ನವಜಾತ ಶಿಶುಗಳಲ್ಲಿ ನಾಲ್ವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳಾಗಿದ್ದಾರೆ, ಈ ಎಲ್ಲಾ ಮಕ್ಕಳು ಎರಡು ಪೌಂಡ್ಗಳಿಗಿಂತ ಕಡಿಮೆ ತೂಕವಿದ್ದಾರೆ. ಎಲ್ಲಾ ಆರು ಶಿಶುಗಳು ಹಾಗೂ ಜನ್ಮ ನೀಡಿದ ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಫರ್ಜಾನಾ ತಿಳಿಸಿದ್ದಾರೆ.
ಮೊಹಮ್ಮದ್ ವಹೀದ್ ಅವರ ಪತ್ನಿ ಜೀನತ್ ವಹೀದ್ ಎಂಬ ಮಹಿಳೆ ಒಂದು ಗಂಟೆಯೊಳಗೆ ಆರು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಜೀನತ್ ಅವರಿಗೆ ಇದು ಮೊದಲ ಹೆರಿಗೆಯಾಗಿದೆ. ಗುರುವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ಕರೆತರಲಾಗಿತ್ತು. ಜೀನತ್ ಅವರ ಕುಟುಂಬ ಸದಸ್ಯರು ಶಿಶುಗಳ ಜನನದ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…