ಅಜಾಕ್ಸ್ ಕಂಪನಿ ಮುಂಭಾಗ ಚಿರತೆ ಪ್ರತ್ಯಕ್ಷ: ಆತಂಕಗೊಂಡ ಸ್ಥಳೀಯರು: ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

ತಾಲೂಕಿನ ಅರೇಹಳ್ಳಿ- ಗುಡ್ಡದಹಳ್ಳಿ ಬಳಿ ಇರುವ ಅಪೇರಲ್ ಪಾರ್ಕ್ ಹಾಗೂ ಅಜಾಕ್ಸ್ ಕಂಪನಿ ಮುಂಭಾಗ ಚಿರತೆಯೊಂದು ಓಡಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚೆಗೆ ವೀರಾಪುರ ಗ್ರಾಮದಲ್ಲೂ ಸಹ ಚಿರತೆ ಕಾಣಿಸಿಕೊಂಡಿತ್ತು. ಈ ಎರಡು ಕಡೆಯಲ್ಲಿ ಚಿರತೆ ಓಡಾಡುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೂರಾರು ಕಾರ್ಖಾನೆಗಳಿಗೆ ಕೆಲಸಕ್ಕೆಂದು ಸ್ಥಳೀಯರು ಸೇರಿದಂತೆ ದೂರದ ಊರುಗಳಿಂದ ಸಾವಿರಾರು ಮಂದಿ ಕಾರ್ಮಿಕರು ಬರುತ್ತಾರೆ. ಇದೀಗ ಚಿರತೆ ಉಪಟಳದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ಒಬ್ಬೊಂಟಿಯಾಗಿ ಓಡಾಡಲು ಭಯಭೀತರಾಗಿದ್ದಾರೆ.

ಸದ್ಯ ಚಿರತೆ ಪ್ರತ್ಯಕ್ಷದ ಮಾಹಿತಿ‌ ತಿಳಿದ ಜನ ಆತಂಕದಲ್ಲಿದ್ದಾರೆ. ಅರಣ್ಯ ಇಲಾಖೆ ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

3 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

4 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

15 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

23 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago