ಅಟೆನ್ಷನ್ ಡೈವರ್ಟ್ ಮಾಡಿ ಕಳ್ಳತನ ಮಾಡ್ತಿದ್ದ ಕುಪ್ಪಂ ಗ್ಯಾಂಗ್ ಅಂದರ್

ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬಸ್ಸುಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಪ್ಪಂ ಗ್ಯಾಂಗ್ ನ್ನು ಅರೆಸ್ಟ್ ಮಾಡಲಾಗಿದೆ.

ಬಂಧಿತರಿಂದ ಸುಮಾರು 12 ಲಕ್ಷ ಮೌಲ್ಯದ ಚಿನ್ನಾಭರಣ, 3.50 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ..

ಈ ಖತರ್ನಾಕ್ ಕುಪ್ಪಂ ಗ್ಯಾಂಗ್ ಕಳ್ಳತನಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುವ ವೇಳೆ ಮಕ್ಕಳಿಗೆ ವಾಂತಿ ಬರುವ ನಾಟಕ ಮಾಡಿ, ಪ್ರಯಾಣಿಕ ಗಮನ ಬೇರೆಡೆ ಸೆಳೆದು ಆಭರಣಗಳನ್ನ ಕದಿಯುತ್ತಿದ್ದರು.

ಇದೇ ರೀತಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವೃದ್ಧೆಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿತ್ತು. ವೃದ್ದೆ ಧರಿಸಿದ್ಧ 74ಗ್ರಾಂ ಚಿನ್ನದ ಮಾಂಗಲ್ಯ‌ ಸರ ಕದ್ದು ಎಸ್ಕೇಪ್ ಆಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸದ್ಯ ಬಂಧನ ಮಾಡಲಾಗಿದೆ.

ಸದ್ಯ ಎ1 ದಿವಾಕರ್ ಬಂಧಿಸಿದ್ದು, ಉಳಿದ ಎ2 ಮೋನಿಷಾ, ಎ3 ಗಾಯಿತ್ರಿ, ಎ4 ಇಂದ್ರಾ ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ.

ಪ್ರಕರಣ ಭೇದಿಸಿರುವ ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಗೋವಿಂದ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಚಂದ್ರಕಾಂತ್ ಅವರಿಂದ ಪ್ರಶಂಸೆ ವ್ಯಕ್ತವಾಗಿದೆ..

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 hour ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

14 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

19 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

22 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

23 hours ago