ಬೆಂಗಳೂರು: ರಾಜಧಾನಿಯ ಅಬ್ಬಿಗೆರೆಯಲ್ಲಿ ಸಣ್ಣಪುಟ್ಟ ಕೌಟುಂಬಿಕ ಕಲಹವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯೊಂದಿಗೆ ಉಂಟಾದ ಮನಸ್ತಾಪದಿಂದ ಬೇಸತ್ತ ಸಾಫ್ಟ್‌ವೇರ್ ಎಂಜಿನಿಯರ್ ಸುಷ್ಮಾ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಯ ಹಿನ್ನೆಲೆ:
ಮೃತ ಸುಷ್ಮಾ ಖ್ಯಾತ ಡೆಲ್ (Dell) ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಇವರ ವಿವಾಹ ಪುನೀತ್ ಕುಮಾರ್ ಎಂಬುವವರೊಂದಿಗೆ ನಡೆದಿತ್ತು. ಈ ದಂಪತಿಗೆ 4 ವರ್ಷದ ಮುದ್ದಾದ ಗಂಡು ಮಗುವಿದೆ. ಆದರೆ, ಕಳೆದ ಕೆಲವು ಸಮಯದಿಂದ ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇತ್ತೀಚೆಗೆ ಒಂದೇ ಒಲೆಯ ಮೇಲೆ ಪ್ರತ್ಯೇಕವಾಗಿ ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಕಲ್ಪನಾ ಹಾಗೂ ಸೊಸೆ ಸುಷ್ಮಾ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಅತ್ತೆ ಕಲ್ಪನಾ ಅವರು ಅಡುಗೆ ಮಾಡುವ ವೇಳೆ ಸೊಸೆಗೆ ಜಾಗ ಬಿಟ್ಟು ಕೊಡುತ್ತಿರಲಿಲ್ಲ ಎನ್ನಲಾಗಿದ್ದು, ಈ ವಿಚಾರದಿಂದ ಸುಷ್ಮಾ ತೀವ್ರ ಮನನೊಂದಿದ್ದರು.
ಅತ್ತೆಯ ವರ್ತನೆಯಿಂದ ಜಿಗುಪ್ಸೆಗೊಂಡ ಸುಷ್ಮಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಸುಷ್ಮಾ ಅವರ ಮನೆಯವರು ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಷ್ಮಾ ಸಾವಿನ ಬಳಿಕ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪತಿ ಬಂಧನ; ಅತ್ತೆಗಾಗಿ ಹುಡುಕಾಟ
ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಷ್ಮಾ ಮನೆಯವರು ನೀಡಿದ ದೂರಿನ ಅನ್ವಯ ಪೊಲೀಸರು ಈಗಾಗಲೇ ಪತಿ ಪುನೀತ್ ಕುಮಾರ್‌ನನ್ನು ಬಂಧಿಸಿದ್ದಾರೆ. ಇನ್ನು ತಲೆಮರೆಸಿಕೊಂಡಿರುವ ಅತ್ತೆ ಕಲ್ಪನಾ ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ದಶಕಗಳ ಕಾಲ ಓದಿ, ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಅಡುಗೆ ಮಾಡುವಂತಹ ಕ್ಷುಲ್ಲಕ ವಿಚಾರಕ್ಕೆ ಜೀವ ಕಳೆದುಕೊಂಡಿರುವುದು ತೀವ್ರ ವಿಷಾದದ ಸಂಗತಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…
ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…
ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ…
ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್…