ಹಠಾತ್ ಆಗಿ ಅಡ್ಡ ಬಂದ ಬೈಕ್ ನ್ನು ಪಾರು ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 5:50ರಲ್ಲಿ ರಾಜಾನುಕುಂಟೆ ಬಳಿ ಹಾದು ಹೋಗಿರುವ ಹೆದ್ದಾರಿಯಲ್ಲಿ ನಡೆದಿದೆ.
ಟಿಟಿ ವಾಹನ ದೊಡ್ಡಬಳ್ಳಾಪುರದ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡುತ್ತಿತ್ತು ಎನ್ನಲಾಗಿದೆ.
ಕಾರ್ಖಾನೆಗೆ ಕಾರ್ಮಿಕರನ್ನು ಡ್ರಾಪ್ ಮಾಡಿ ರಾಜಾನುಕುಂಟೆ ಬಳಿ ಹೋಗುತ್ತಿದ್ದ ವೇಳೆ ಬೈಕ್ ಇದ್ದಕ್ಕಿದ್ದಾಗೆ ಅಡ್ಡ ಬಂದಿದೆ. ಆಗ ಬೈಕ್ ನ್ನು ಪಾರು ಮಾಡಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಿಟಿ ವಾಹನ ಚಾಲಕ ಹಾಗೂ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.