ಅಣಬೆ ಬೇಸಾಯ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಜೂನ್‌ 17 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್‌ 12 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

4 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

5 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

6 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

6 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

8 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

8 hours ago