ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…