Categories: Crime

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ.

ಘಟನೆಯಲ್ಲಿ 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ, 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

35 ವರ್ಷದ ಖಾಸೀಂ ಮೂರು ಮಕ್ಕಳ ಗುಪ್ತಾಂಗಗಳಿಗೆ ಕಬ್ಬಿಣದ ರಾಡ್‌ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.

ಗಾರೆ ಕೆಲಸ ಮಾಡುವ ಚಾಂದ್‌ ಪಾಷಾ ಕಮ್ಮಸಂದ್ರದ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು, ತಾಯಿ ಮತ್ತು ತಮ್ಮನ ಜೊತೆ ವಾಸವಿದ್ದರು. ಪತ್ನಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾರೆ. ದಂಪತಿ ಕೆಲಸಕ್ಕೆ ಮತ್ತು ಪಾಷಾ ತಾಯಿ ಮಾರುಕಟ್ಟೆಗೆ ಹೋಗಿದ್ದರು. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಕ್ಕಳ ಬಾಯಿಗೆ ಬಟ್ಟೆ ತುರುಕಿದ ಖಾಸಿಂ ಕಬ್ಬಿಣದ ರಾಡ್‌ ಮತ್ತು ಸುತ್ತಿಗೆಯಿಂದ ಮಕ್ಕಳ  ಖಾಸಗಿ ಭಾಗ ಹಾಗೂ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

ಮಕ್ಕಳ ಕೂಗಾಟ ಕೇಳಿಸದಂತೆ ಮೂವರ ಬಾಯಿಗೆ ಬಟ್ಟೆ ತುರುಕಿದ್ದರೂ ಮಕ್ಕಳು ಕೂಗು, ಗಲಾಟೆ ಅಕ್ಕಪಕ್ಕದ ಮನೆಯವರಿಗೆ ಕೇಳಿಸಿದೆ. ಅನುಮಾನಗೊಂಡ ಅವರು ಬಾಗಿಲು ತಟ್ಟಿದಾಗ ಖಾಸಿಂ ತೆಗೆಯಲಿಲ್ಲ. ಆಗ ಬಾಗಿಲು ಒಡೆದು ಒಳ ನುಗ್ಗಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದರು.

ಮತ್ತೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಸ್ಥಳೀಯರು ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಿದರು.

ಮಾನಸಿಕ ಅಸ್ವಸ್ಥನಾಗಿದ್ದ ಖಾಸಿಂ ಕಳೆದ ತಿಂಗಳು ಮನೆಯಿಂದ ಏಕಾಏಕಿ ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್‌ ಪಾಷಾ ಹುಡುಕಿ ಕರೆ ತಂದು ಮನೆಯಲ್ಲಿಯೇ ಇಟ್ಟುಕೊಂಡಿದ್ದ.

ಜಂಟಿ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌, ಡಿಸಿಪಿ ಎಂ.ನಾರಾಯಣ್‌, ಎಸಿಪಿ ಸತೀಶ್, ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

6 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

9 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

11 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

22 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

1 day ago