ಡಾ.ರಾಜ್‌ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.
ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಿವೆ.
50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.
30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.
ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…