Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

11 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

17 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

21 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

23 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

2 days ago