Categories: ರಾಜ್ಯ

ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವರಾದ  ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ ಎಂದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು ಎಂದು ಹೇಳಿದರು.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

1 hour ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

5 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

6 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

6 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

10 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

21 hours ago