ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…