2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.
ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.
ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…