ಅತಿಯಾದ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ 

ವಿಶ್ವ ಪರಿಸರ ದಿನದ ಅಂಗವಾಗಿ ಯಲಹಂಕದ ರೇವಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಾ.ಶಿಲ್ಪ ಸಮನ್ವಯ ಸಂಸ್ಥೆ ವತಿಯಿಂದ ಅತಿಯಾದ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಎ.ಎಸ್.ಪಿ ರಾಜ ಇಮಾಮ್ ಖಾಸೀಮ್, ಇತ್ತೀಚೆಗೆ ಮಕ್ಕಳಿಂದ ದೊಡ್ಡವರವರೆಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಗೆ ದಾಸರಾಗಿ ತಮ್ಮ ವೈಯುಕ್ತಿಕ ಮಾಹಿತಿಗಳನ್ನೂ ಬಿಡದೆ ಹಂಚಿಕೊಳ್ಳುತ್ತಾರೆ. ಕೆಲ ಕಿಡೀಗೇಡಿಗಳು ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದು ತಿಳಿಸಿದರು.

ಶಿಲ್ಪ ಸಮನ್ವಯಿ ಸಂಸ್ಥೆಯ ಅದ್ಯಕ್ಷ ಡಾ.ಶಿಲ್ಪಾ ನವೀನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಮಾನಸಿಕ ಮತ್ತು ದೈಹಿಕ ರೋಗಗಳು ಹೆಚ್ಚುತ್ತಿದೆ. ಜೊತೆಗೆ, ಮಕ್ಕಳ ಮೆದುಳಿನ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದ್ದು, ಮಾನಸಿಕ ಸ್ಥೀಮಿತತೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮುಂದಿನ ಪೀಳಿಗೆಗೆ ಅತಿಯಾದ ಮೊಬೈಲ್ ಫೋನ್ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ನಾವು ನಮ್ಮ ಸಂಸ್ಥೆ ಸದಾ ಸಿದ್ಧರಾಗಿರುತ್ತೇವೆ. ಎಲ್ಲರೂ ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಿ ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *