ಆನೇಕಲ್ ಬಳಿಯ ಅತ್ತಿಬೆಲೆ ಸಮೀಪ ಸಂಭವಿಸಿರುವ ಪಟಾಕಿ ದುರಂತದಲ್ಲಿ 12 ಮಂದಿ ಜೀವಂತ ದಹನವಾಗಿರುವ ಸುದ್ದಿ ದುಃಖಕರ. ವಿಷಯ ತಿಳಿದ ಕೂಡಲೇ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ದುರಂತದ ಕಾರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನೋವಿನಲ್ಲಿರುವ ಕುಟುಂಬದ ಜೊತೆ ನಾವಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅತ್ತಿಬೆಲೆಯಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕರ್ನಾಟಕ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ
ಪಟಾಕಿಯನ್ನ ಹೊತ್ತ ಗಾಡಿಯಿಂದ ಸರಕು ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಮೂರು ಅಂಗಡಿಗಳಿಗೆ ತಗಲಿದೆ, ಪಟಾಕಿಯಲ್ಲಿ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ದೀಪಾವಳಿ ಹಬ್ಬಕ್ಕಾಗಿ ಪಟಾಕಿ ಮಾರಾಟಕ್ಕಾಗಿ ಪಟಾಕಿಗಳನ್ನ ತರಲಾಗಿದ್ದು, ಗಾಡಿಯಿಂದ ಪಟಾಕಿಯನ್ನ ಅನ್ ಲೋಡ್ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯ ಅವಘಡದಲ್ಲಿ ಒಂದು ಲಾರಿ 2 ಟಾಟಾ ಏಸ್ ಗಾಡಿಗಳು ಮತ್ತು 4 ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಪಟಾಕಿ ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದು, 13 ಕಾರ್ಮಿಕರ ಶವಗಳು ಸುಟ್ಟುಕರಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ,
ತಮಿಳುನಾಡು ಮತ್ತು ರಾಜ್ಯದಿಂದ ಬಂದಿದ್ದ 7 ಅಗ್ನಿಶಾಮಕ ದಳಗಳು ಬೆಂಕಿ ನಂದಿಸುವಲ್ಲಿ ಶ್ರಮಿಸಿದವು, ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.