ಅತ್ತಿಬೆಲೆ ಸಮೀಪ ಪಟಾಕಿ ದುರಂತ: 12ಮಂದಿ ಜೀವಂತ ದಹನ: ಸ್ಥಳಕ್ಕೆ ಡಿಸಿಎಂ ಡಿಕೆಶಿ ಭೇಟಿ, ಪರಿಶೀಲನೆ: ಮೃತರ ಕುಟುಂಬಕ್ಕೆ‌ 5ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಆನೇಕಲ್‌ ಬಳಿಯ ಅತ್ತಿಬೆಲೆ ಸಮೀಪ ಸಂಭವಿಸಿರುವ ಪಟಾಕಿ ದುರಂತದಲ್ಲಿ 12 ಮಂದಿ ಜೀವಂತ ದಹನವಾಗಿರುವ ಸುದ್ದಿ ದುಃಖಕರ. ವಿಷಯ ತಿಳಿದ ಕೂಡಲೇ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ದುರಂತದ ಕಾರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನೋವಿನಲ್ಲಿರುವ ಕುಟುಂಬದ ಜೊತೆ ನಾವಿದ್ದೇವೆ‌ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಅತ್ತಿಬೆಲೆಯಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕರ್ನಾಟಕ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ

ಪಟಾಕಿಯನ್ನ ಹೊತ್ತ ಗಾಡಿಯಿಂದ ಸರಕು ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಮೂರು ಅಂಗಡಿಗಳಿಗೆ ತಗಲಿದೆ, ಪಟಾಕಿಯಲ್ಲಿ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ದೀಪಾವಳಿ ಹಬ್ಬಕ್ಕಾಗಿ ಪಟಾಕಿ ಮಾರಾಟಕ್ಕಾಗಿ ಪಟಾಕಿಗಳನ್ನ ತರಲಾಗಿದ್ದು, ಗಾಡಿಯಿಂದ ಪಟಾಕಿಯನ್ನ ಅನ್ ಲೋಡ್ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯ ಅವಘಡದಲ್ಲಿ ಒಂದು ಲಾರಿ 2 ಟಾಟಾ ಏಸ್ ಗಾಡಿಗಳು ಮತ್ತು 4 ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಪಟಾಕಿ ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದು, 13 ಕಾರ್ಮಿಕರ ಶವಗಳು ಸುಟ್ಟುಕರಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ,

ತಮಿಳುನಾಡು ಮತ್ತು ರಾಜ್ಯದಿಂದ ಬಂದಿದ್ದ 7 ಅಗ್ನಿಶಾಮಕ ದಳಗಳು ಬೆಂಕಿ ನಂದಿಸುವಲ್ಲಿ ಶ್ರಮಿಸಿದವು, ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

29 seconds ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

15 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago