‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್

ಬೆಂಗಳೂರು, ಡಿಸೆಂಬರ್ 18, 2024: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ.

ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು ಹೊಂದಿರುವ ನಂಬಿಕೆ ಮತ್ತು ಮೆಚ್ಚುಗೆಯ ಪ್ರತಿರೂಪವಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್, “ಕಾಂಡೆ ನಾಸ್ಟ್ ಟ್ರಾವೆಲರ್ ಮತ್ತು ಟ್ರಾವೆಲ್ + ಲೀಶರ್ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರ ಲಾಂಜ್‌ಗೆ ಸಿಕ್ಕಿರುವ ಈ ಮನ್ನಣೆ ಪ್ರಶಂಸನೀಯ, ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ನಮಗೆ ಪ್ರೇರಣೆ ನೀಡಿದಂತಾಗಿದೆ” ಎಂದರು.

ಟರ್ಮಿನಲ್‌ 2 ಆರಂಭಗೊಂಡ ಬಳಿಕ ನೀಡುತ್ತಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಸ್ತಿಗಳ ಮನ್ನಣೆ ದೊರೆಯುತ್ತಾ ಬಂದಿದ್ದು, ಇದು ವಿಮಾನ ನಿಲ್ದಾಣದ ಸೇವಾ ಉತ್ಕೃಷ್ಟತೆಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್‌ 2 ಲಾಂಜ್‌ ತನ್ನ ವಿಶ್ವ ದರ್ಜೆಯ ವಿನ್ಯಾಸ, ಉನ್ನತ ಆತಿಥ್ಯ ಮತ್ತು ಆಧುನಿಕ ಐಷಾರಾಮಿ ಸೌಕರ್ಯದೊಂದಿಗೆ ಸ್ಥಳೀಯ ಸಂಸ್ಕೃತಿಯ ಅನನ್ಯ ಸಮ್ಮಿಲನದಿಂದ ಕೂಡಿದೆ. ಟರ್ಮಿನಲ್‌ 2 ನಲ್ಲಿನ 080 ಲಾಂಜ್‌ಗಳು ಬೆಂಗಳೂರಿನ ಹೆಮ್ಮೆಯ ಸಂಸ್ಕೃತಿ ಮತ್ತು ಹಸಿರು ಪರಿಸರದಿಂದ ಪ್ರೇರಿತವಾದ ನವೀನ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಯ್ಕೆ, ವರ್ಕ್‌ಸ್ಟೇಷನ್‌, ಹೈ-ಸ್ಪೀಡ್ ವೈ-ಫೈ ಮತ್ತು ಪ್ರೀಮಿಯಂ ಆತಿಥ್ಯ ಸೇವೆಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿಯ ಅನುಭವವನ್ನು ನೀಡುತ್ತಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago