ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಆಕೆಯ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಯಾಸೀನ್ ಬಾಗೊಡೆ (21) ಮತ್ತು ಹೀನಾ (19) ಕೊಲೆಗೀಡಾದವರು. ತೌಫಿಕ್ ಕ್ಯಾಡಿ ಕೊಲೆ ಮಾಡಿದ ಆರೋಪಿ.
ಕೊಲೆ ಮಾಡುವ ವೇಳೆ ಅಡ್ಡಬಂದ ಅಮಿನಾಬಾಯಿ ಬಾಗೊಡೆ ಹಾಗೂ ಮುಸ್ತಫಾ ಮುಲ್ಲಾ ಮೇಲೂ ಆರೋಪಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಪರಿಣಾಮ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕೊಲೆಯಾದ ಹೀನಾಳನ್ನ ಆರೋಪಿ ತೌಫಿಕ್ ಜೊತೆ 4 ತಿಂಗಳ ಹಿಂದೆ ಮದುವೆ ಮಾಡಲಾಗಿತ್ತು. ಆದರೆ ಮದುವೆಯಾಗಿ ಕೆಲ ತಿಂಗಳಿಗೆ ತಾನು ಈ ಹಿಂದೆ ಪ್ರೀತಿ ಮಾಡುತ್ತಿದ್ದ ಯಾಸೀನ್ ಎಂಬಾತನ ಜೊತೆ ಹೀನಾ ಓಡಿ ಹೋಗಿದ್ದಳು.
ಒಂದೂವರೆ ತಿಂಗಳ ಬಳಿಕ ಕೆಲ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು, ಪತಿ ತೌಫಿಕ್ ಜೊತೆ ವಿವಾಹ ಮುರಿದು ಯಾಸೀನ್ ಜೊತೆ ಮದುವೆ ಮಾಡಿಸಿದ್ದರು.
ಇದರಿಂದ ತೌಫಿಕ್ ಕೋಪಿತಗೊಂಡು ಯಾಸೀನ್ ಮನೆಗೆ ತೆರಳಿ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡಿ, ಪೊಲೀಸ್ ಠಾಣೆಗೆ ಹೋಗಿವುದಾಗಿ ಹೇಳಿ ಪರಾರಿಯಾಗಿದ್ದಾನೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…