ಅದಲಗೆರೆಯಲ್ಲಿ ಹೃದಯವಿದ್ರಾವಕ ಘಟನೆ: ವಿಕಲಚೇತನ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ….!

ತಾಯಿಯೊಬ್ಬರು ತನಗೆ ಸಕ್ಕರೆ ಕಾಯಿಲೆ ಬಂದಿದೆ ಇನ್ನು ಬದುಕುವುದಿಲ್ಲ ಎಂದು ಹೆದರಿ ತನ್ನ ಇಬ್ಬರು ಅಂಗವಿಕಲ & ಬುದ್ಧಿಮಾಂದ್ಯ ಮಕ್ಕಳಿಗೆ ಸೀರೆಯಿಂದ ನೇಣು ಹಾಕಿ ಕೊಲೆ ಮಾಡಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.

ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮೃತ ದುರ್ದೈವಿಗಳು.

ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಕಳೆದ ರಾತ್ರಿ ಭೇಟಿ ಮಾಡಿ ಸ್ಥಳದ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *