”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್‌ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.
ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.
ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.
ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.
ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…