ಅದಾನಿ ಷೇರುಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಪ್ರತಿಪಕ್ಷ ಒತ್ತಾಯ: ಸಂಸತ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಆದಾಗ ಮೈಕ್ ಸ್ವಿಚ್ ಆಫ್, ಗದ್ದಲ ಸ್ಫೋಟ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್‌ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.

ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.

ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.

ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago