Categories: ಕೋಲಾರ

ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಸಮುದಾಯದ ಮುಖಂಡರ ನಿರ್ಧಾರ

ಕೋಲಾರ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ನಗರದ ಹೊರವಲಯದ ಶ್ರೀನಿವಾಸಪುರ ರಸ್ತೆಯ ಆರ್.ಜಿ ಲೇಔಟ್ ನಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಯೋಜನೆ ಮಾಡಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಕೋಲಾರ ತಾಲೂಕಿನಿಂದ ಸುಮಾರು 120ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆಯನ್ನು ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು ಜಯಂತಿಯನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶವನ್ನು ಸಾರುವ ರೀತಿಯಲ್ಲಿ ಆಚರಿಸೋಣ ಎಂದರು.

ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿರುವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಚರ್ಚಿಸಬೇಕು ಜೊತೆಗೆ ಸಮುದಾಯದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಸಭೆಯಲ್ಲಿ ತರುವಂತೆ ನಿರ್ಧರಿಸಲಾಯಿತು.

ಸಭೆಯಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್, ಮುಖಂಡರಾದ ಬಾಲಗೋವಿಂದ್, ಮಾಲೂರು ಎನ್ ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ಬೈರಂಡಹಳ್ಳಿ ನಾಗೇಶ್, ಅಡ್ಡಗಲ್ ನರೇಶ್, ನರಸಿಂಹಪ್ಪ, ಕಮಾಂಡಹಳ್ಳಿ ನಾರಾಯಣಸ್ವಾಮಿ, ಭುವನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

4 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

8 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

16 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

19 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

22 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

23 hours ago