ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಈ ಸಂಬಂಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. UIDAI ಮತ್ತು ECI ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ.
ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಆದ್ದರಿಂದ, EPIC ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6) ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು.
ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…