ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.
ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5,000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2,600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ ಎಂದರು.
ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟು ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ. ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಈ ವಿಷಯದಲ್ಲಿ ಅನುಮಾನವೇ ಬೇಡ ಎಂದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…