ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ ರಾಜಕೀಯ ಚಾಣಾಕ್ಷತನವನ್ನು ಪ್ರದರ್ಶಿಸಿದ್ದಾರೆ. ಇತ್ತೀಚಿನವರೆಗೂ ರಾಜಕೀಯವಾಗಿ ತೀವ್ರ ಟೀಕೆ ಹಾಗೂ ವಾಗ್ದಾಳಿಗೆ ಗುರಿಯಾಗಿದ್ದ ವಿರೋಧ ಪಕ್ಷಗಳ ನಾಯಕರ ಮನೆಬಾಗಿಲಿಗೆ ತೆರಳಿ ಆಹ್ವಾನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎನ್ನುವ ಮಾತಿಗೆ ಮತ್ತೊಮ್ಮೆ ಅರ್ಥ ನೀಡಿರುವ ಡಿಕೆಶಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರನ್ನು ಖುದ್ದಾಗಿ ಭೇಟಿ ಮಾಡಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ರಾಜಕೀಯ ಸಂದೇಶದ ಹಿಂದೆ ದೊಡ್ಡ ಲೆಕ್ಕಾಚಾರ

ಸಾಮಾನ್ಯವಾಗಿ ಅಧಿಕಾರಕ್ಕೇರುವ ಸಂದರ್ಭದಲ್ಲಿ ತಮ್ಮ ಪಕ್ಷದ ನಾಯಕರನ್ನು ಮಾತ್ರ ಕೇಂದ್ರಬಿಂದುವಾಗಿಸಿಕೊಳ್ಳುವ ರಾಜಕೀಯ ನಾಯಕರು ಹಲವರಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಅವರು ಅಧಿಕಾರದ ಮೊದಲ ಹೆಜ್ಜೆಯಲ್ಲೇ ಪ್ರತಿಪಕ್ಷ ನಾಯಕರ ಮನೆಗೆ ತೆರಳಿರುವುದು ಕೇವಲ ಔಪಚಾರಿಕತೆ ಅಲ್ಲ ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಮುಂದಿನ ಎರಡು ವರ್ಷಗಳ ಆಡಳಿತವನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ರಾಜಕೀಯ ಸಹಕಾರ ಮತ್ತು ಸಾಮಾಜಿಕ ಸಮನ್ವಯವನ್ನು ಈಗಿನಿಂದಲೇ ಕಟ್ಟಿಕೊಳ್ಳುವ ಪ್ರಯತ್ನ ಇದಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ವಿರೋಧ ಪಕ್ಷಗಳೊಂದಿಗೆ ಸಂಘರ್ಷಕ್ಕಿಂತ ಸಂವಾದಕ್ಕೆ ಆದ್ಯತೆ ನೀಡುವ ಸಂದೇಶವನ್ನು ಡಿಕೆಶಿ ರವಾನಿಸಿದ್ದಾರೆ.

ಜಾತಿ ಸಮೀಕರಣಕ್ಕೂ ಮಹತ್ವ

ರಾಜಕೀಯ ವಿಶ್ಲೇಷಕರ ಪ್ರಕಾರ, ಈ ಭೇಟಿಗಳ ಹಿಂದೆ ಜಾತಿ ಸಮೀಕರಣದ ಅಂಶವೂ ಅಡಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ಸಮುದಾಯಗಳಾದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳ ಮನಸ್ಸು ಗೆಲ್ಲುವ ಉದ್ದೇಶವೂ ಈ ನಡೆಗೆ ಕಾರಣ ಎನ್ನಲಾಗುತ್ತಿದೆ.

ಯಡಿಯೂರಪ್ಪ ಅವರ ಮೂಲಕ ಲಿಂಗಾಯತ ಸಮುದಾಯಕ್ಕೆ ಹಾಗೂ ದೇವೇಗೌಡರ ಮೂಲಕ ಒಕ್ಕಲಿಗ ಸಮುದಾಯಕ್ಕೆ ಸೌಹಾರ್ದ ಮತ್ತು ಗೌರವದ ಸಂದೇಶ ರವಾನಿಸಲು ಡಿಕೆಶಿ ಯತ್ನಿಸಿದ್ದಾರೆ. ಇಬ್ಬರೂ ನಾಯಕರು ತಮ್ಮ ಸಮುದಾಯಗಳಲ್ಲಿ ಪ್ರಭಾವಿ ಸ್ಥಾನಮಾನ ಹೊಂದಿರುವ ಹಿನ್ನೆಲೆಯಲ್ಲಿ ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ಸರ್ವಧರ್ಮ ಸಮನ್ವಯದ ಸಂದೇಶ

ಇದಷ್ಟೇ ಅಲ್ಲದೆ ವಿವಿಧ ಧರ್ಮಗಳ ಗುರುಗಳು, ಮಠಾಧೀಶರು ಹಾಗೂ ಸಮುದಾಯಗಳ ಸ್ವಾಮೀಜಿಗಳಿಗೂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಇದರ ಮೂಲಕ ಎಲ್ಲ ವರ್ಗಗಳನ್ನೂ ಜೊತೆಯಲ್ಲಿ ಕೊಂಡೊಯ್ಯುವ ಆಡಳಿತದ ಸಂದೇಶವನ್ನು ಕಾಂಗ್ರೆಸ್ ನಾಯಕತ್ವ ನೀಡಲು ಮುಂದಾಗಿದೆ.

ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣ

ಪ್ರಮಾಣ ವಚನಕ್ಕೂ ಮುನ್ನವೇ ವಿರೋಧ ಪಕ್ಷಗಳ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವ ಡಿ.ಕೆ. ಶಿವಕುಮಾರ್ ಅವರ ನಡೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಅಧಿಕಾರ ಸ್ವೀಕಾರದ ಮೊದಲ ದಿನದಿಂದಲೇ ಸಂಘರ್ಷದ ರಾಜಕಾರಣಕ್ಕಿಂತ ಸಮನ್ವಯದ ರಾಜಕಾರಣಕ್ಕೆ ಒತ್ತು ನೀಡುವ ಸೂಚನೆಯನ್ನು ಡಿಕೆಶಿ ನೀಡಿದ್ದಾರೆ.

ಒಟ್ಟಾರೆ, ಮುಖ್ಯಮಂತ್ರಿ ಗಾದಿ ಏರುವ ಮುನ್ನವೇ ರಾಜಕೀಯ ಪ್ರತಿಸ್ಪರ್ಧಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ತಮ್ಮ ರಾಜಕೀಯ ಚಾಣಾಕ್ಷತನವನ್ನು ಪ್ರದರ್ಶಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ತಂತ್ರ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

3 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

15 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

16 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

20 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

21 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

1 day ago