Categories: ಕೋಲಾರ

ಅಧಿಕಾರವಿದ್ದಾಗ ಸುಮ್ಮನೆ ಇದ್ದು ಚುನಾವಣೆ ಬಂದಾಗ ರಾಜಕೀಯ ಗಿಮಿಕ್ ಮಾಡಲು ಹೊರಟಿದ್ದಾರೆ – ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ

ಕೋಲಾರ: ಹತ್ತು ವರ್ಷಗಳ ಕಾಲ ಕ್ಷೇತ್ರದ ಜನತೆಯ ಆಶೀರ್ವಾದದಿಂದ ವರ್ತೂರು ಪ್ರಕಾಶ್ ಕ್ಷೇತ್ರದ ಶಾಸಕ ಸಚಿವರಾಗಿದ್ದರು ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು ಅವತ್ತು ಸುಮ್ಮನೆ ಇದ್ದು ಇವತ್ತು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು ಎಂದು ವರ್ತೂರು ಪ್ರಕಾಶ್ ಮತ್ತು ಸಿ.ಎಸ್ ವೆಂಕಟೇಶ್ ವಿರುದ್ದ ವಾಗ್ದಾಳಿ ನಡೆಸಿದರು

ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಗಳು ಅಭಿವೃದ್ಧಿ ಮಾಡಲಾಗುತ್ತದೆ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು

ಇವತ್ತು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಸ ಕೊಡಬೇಡಿ ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

4 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

6 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

9 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

10 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

17 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

17 hours ago