ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಗೋಮಾಳ ಕಬಳಿಕೆ ಆರೋಪ‌: ಇದು ಸತ್ಯಕ್ಕೆ ದೂರವಾದದ್ದು- ನನ್ನ ನೇತೃತ್ವದಲ್ಲಿ ಅದು ನಡೆಯೋದಕ್ಕೆ ಸಾಧ್ಯವೇ ಇಲ್ಲ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ‌ ಹೇಳಿಕೆ

ಘಾಟಿ ಸುತ್ತಾಮುತ್ತಾ ಇರುವ ಸರ್ಕಾರಿ ಭೂಮಿಯನ್ನು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ ಎಂಬ ಆರೋಪ‌ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡುವುದಿಲ್ಲ. ನನ್ನ ನೇತೃತ್ವದಲ್ಲಿ ಅದು ನಡೆಯುವುದಿಲ್ಲ. ಇತ್ತೀಚೆಗೆ ಡೆವೆಲಪರ್ಸ್ ಈಚೆಗೆ ಬಂದಿದ್ದಾರೆ. ಈ ಭಾಗದಲ್ಲಿ ಜಮೀನುಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಅಲ್ವಾ ಅವರು ಮಾಡಿದ್ದಾರೋ ಅದು ನನಗೆ ಗೊತ್ತಿಲ್ಲ. ಆ ಡೆಲಪರ್ಸ್ ಮಾಡಿದ್ರೆ ಮಾಡಿರುತ್ತಾರೆ ಹೊರೆತು ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡುವುದಿಲ್ಲ. ಒಂದು ವೇಳೆ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ಬಡವರಿಗೆ ಜಮೀನು ಕೊಡಬೇಕು. ಫಾರಂ ನಂಬರ್ 53 ಹಾಗೂ 57 ಅರ್ಜಿಗಳನ್ನು ಹಾಕಿಕೊಂಡು ಸರ್ಕಾರಿ ಗೋಮಾಳದಲ್ಲಿ ರೈತರು ಉಳುಮೆ ಮಾಡುತ್ತಾ ಇರುತ್ತಾರೋ ಅಂತಹವರಿಗೆ ಜಮೀನು ಕೊಡಬೇಕಾಗುತ್ತದೆ ಎಂದು ಹೇಳುತ್ತಾ… ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಮರ್ಥಿಸಿಕೊಂಡರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

4 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

17 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

18 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

20 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

21 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

23 hours ago