ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…