ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

22 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

2 days ago