Categories: ಕೋಲಾರ

ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಚರ್ಚೆಗೆ ಸುನಿಲ್ ಕುಮಾರ್ ಒತ್ತಾಯ

ಕೋಲಾರ: ವಿಧಾನಮಂಡಲದ ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣ ಬಗ್ಗೆ ಹಾಗೂ ಶಾಶ್ವತವಾದ ನೀರಾವರಿ ಯೋಜನೆಗಳು ಕುರಿತಂತೆ ವಿಶೇಷ ಚರ್ಚೆ ನಡೆಸುವಂತೆ ಜೆಡಿಎಸ್‌ ಪಕ್ಷದ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯು ಮೊದಲಿನಿಂದಲೂ ಯಾವುದೇ ನದಿ ನಾಲೆಗಳು ಇಲ್ಲದೇ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯಲು ಮತ್ತು ಕೃಷಿ ಚಟುವಟಿಕೆಗಳ ಬಳಕೆಗಾಗಿ ಸುಮಾರು 1500 ಅಡಿ ಆಳದ ಕೊಳವೆಬಾವಿಯಿಂದ ನೀರು ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಂತಹ ಸಂದರ್ಭದಲ್ಲಿ ಅಂತರ್ಜಲ ವೃದ್ದಿಗಾಗಿ ಕೆ.ಸಿ ವ್ಯಾಲಿ ಯೋಜನೆ ಮೂಲಕ ನೀರು ತಂದಿದ್ದು, ಸಂತೋಷವಾದರೂ ಅದು ಮೂರನೇ ಹಂತದ ಶುದ್ದೀಕರಣ ಮಾಡಬೇಕಾಗಿದ್ದು, ಸರಕಾರದ ಜವಾಬ್ದಾರಿಯಾಗಿದ್ದು ಕೂಡಲೇ ಸರಕಾರವು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ದಾಹವನ್ನು ನೀಗಿಸುವ ಉದ್ದೇಶದಿಂದ ನೀರಾವರಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಲವು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸರ್ಕಾರಗಳು ನಿರಂತರವಾಗಿ ಜನರಿಗೆ ಮೋಸ ಮಾಡಿಕೊಂಡೆ ಬಂದಿದ್ದಾರೆ ಬಯಲುಸೀಮೆ ಭಾಗದ ಜಿಲ್ಲೆಗೆ ಅನುಕೂಲಕರವಾದ ವೈಜ್ಞಾನಿಕ ಯೋಜನೆಗಳ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ, ಅದನ್ನು ಪರಿಗಣಿಸಿಲ್ಲ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣದ ಬಗ್ಗೆಯೂ ನಿರ್ಲಕ್ಷ್ಯ ವಹಿಸಿದ್ದು ಸರಿಯಲ್ಲ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ಜಾರಿಗೆ ಮುಂದಾಗಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.

ಬಹುದಿನಗಳಿಂದ ಕೂಡ ಅಮೆಗತಿಯಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆಗೆ ಆದಷ್ಟು ವೇಗ ನೀಡುವ ಮೂಲಕ ಜಿಲ್ಲೆಯ ಜನರಿಗೆ ನೀರು ತರುವ ಪ್ರಯತ್ನ ಮಾಡಬೇಕು ಜೊತೆಗೆ ಜಿಲ್ಲೆಗೆ ಲಕ್ಷ್ಮೀಸಾಗರ ಕೆರೆಯ ಮೂಲಕವೇ ಕೆ.ಸಿ ವ್ಯಾಲಿ ನೀರು ಹರಿಯುತ್ತಿದ್ದು ಆ ಭಾಗದ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಸಕಡ್ಡಿಗಳು ಕೊಳೆತು ಉತ್ಪತ್ತಿಯಾಗುವ ಕ್ರಿಮಿ ಕೀಟಗಳಿಂದ ಸೊಳ್ಳೆಗಳು ಹೆಚ್ಚಾಗಿವೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಕೂಡಲೇ ಕೆರೆಗಳನ್ನು ಸ್ವಚ್ಚತೆಯ ಕಡೆಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಗಮನ ಹರಿಸುವಂತೆ ಒತ್ತಾಯಿಸಿದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago