ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಕೆಲಸ ನಿರ್ವಹಿಸಿ ಗ್ರಾಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂಲಭೂತವಾಗಿ ಗ್ರಾಮಗಳು ಅಭಿವೃದ್ಧಿಯಾಗಬೇಕಾದರೆ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಪ್ರಮುಖ ಪಾತ್ರವಿದೆ. ಮಹಾತ್ಮ ಗಾಂಧೀಜಿಯವರು ಗ್ರಾಮಸ್ವರಾಜ್ಯ ಘೋಷಿಸಿದರು. ಆಹಾರ, ಬಟ್ಟೆಗಳನ್ನು ಸ್ವತಃ ತಾವೇ ತಯಾರಿಸಿ ಸ್ವಾವಲಂಬಿಗಳಾಗಿ ಬೇರಯವರ ಮೇಲೆ ಅವಲಂಬಿತರಾಗದೆ ಬದುಕಬೇಕು ಎಂದರು.
ನರೇಗಾ ಕೆಲಸಗಳು ಪ್ರಾಮಾಣಿಕವಾಗಿ ಆಗಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು ಹೇಳಿದ್ದನ್ನು ಅಧಿಕಾರಿಗಳು ಎಚ್ಚರಿಕೆಯಿಂದ ಕೇಳಿ ಪಾಲಿಸಬೇಕು. ಗ್ರಾಮ ಪಂಚಾಯಿತಿ ನಮ್ಮದೆಂಬ ಭಾವನೆಯಿಂದ ಅದನ್ನು ಅಭಿವೃದ್ಧಿ ಪಡಿಸಲು ಒಗ್ಗೂಡಿ ಚಿಂತನೆ ನಡೆಸಬೇಕು. ಶಾಲೆಗಳ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಯು ಬಹಳ ಮುಖ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ. ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಅಭಿವೃದ್ಧಿಯನ್ನು ಪರಿಶೀಲನೆ ಮಾಡುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ ಮಾತನಾಡಿ ಅಂಬೇಡ್ಕರ್ ರವರು ಕೊಟ್ಟ ಸಂವಿಧಾನದಿಂದ ಮಹಿಳೆಯರಿಗು ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಸಿಗುತ್ತಿದೆ. ಅಧಿಕಾರಿಗಳು, ಅಧ್ಯಕ್ಷರುಗಳು ಸಮನ್ವಯ ಸಾಧಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರವನ್ನು ಸರ್ಕಾರ ನೀಡಿದೆ ಎಂದರು.
ಭಾರತದ ನಿಜವಾದ ಶಕ್ತಿ ಗ್ರಾಮಗಳು. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾದ್ಯ. ಇದು ಗಾಂಧಿಜೀಯವರ ಕನಸು ಎಂದರು. ಕನ್ನಡ ಶಾಲೆಯ ಉಳಿವಿಗೆ ಶ್ರಮ ವಹಿಸಿ ಕನ್ನಡ ಭಾಷೆಯನ್ನು ಬಳಸಬೇಕು. ಭಾರತದ ಆತ್ಮ ಗ್ರಾಮಗಳು. ಸ್ವಚ್ಚ ಭಾರತಕ್ಕೆ ಒತ್ತು ನೀಡಬೇಕು ಗ್ರಾಮದ ಸ್ವಚ್ಚತೆಗೆ ಆಧ್ಯತೆ ನೀಡಿ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…