ಕೋಲಾರ: ಜಿಲ್ಲೆಯಾದ್ಯಂತ ಅನುಮತಿ ಪಡೆಯದೆ ಅನಧಿಕೃತವಾಗಿ ಕಾನೂನು ಉಲ್ಲಂಘನೆ ಮಾಡಿ ನಿರ್ಮಿಸಿರುವ ಧ್ವಜಸ್ತಂಭ, ಬಾವುಟಗಳು, ಬಂಟಿಂಗ್ಸ್ ಸೇರಿದಂತೆ ಮತೀಯ ಭಾವನೆಗಳಿಗೆ ಧಕ್ಕೆ ತರುವ ಅಕ್ರಮ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ಅದೇಶದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಒತ್ತಾಯಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿನ ಘಟನೆಯ ಆಧಾರಿಸಿ ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶವು ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರದ ಕಾನೂನಿನಲ್ಲಿ ಎಲ್ಲಾ ಜಾತಿ ಧರ್ಮಗಳಿಗೂ ಅನ್ವಯಿಸುತ್ತದೆ. ಸರಕಾರವು ಒಂದು ಜಾತಿ ಧರ್ಮವನ್ನು ಒಲೈಕೆ ಮಾಡುವುದನ್ನು ಬಿಟ್ಟು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ನಗರದ ಗಂಗಮ್ಮನ ಗುಡಿಯ ರಂಗನ ಬಾವಿಯ ಕಲ್ಯಾಣಿ, ಸಂಗೊಂಡಹಳ್ಳಿಯ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಇದ್ದ ಕಲ್ಯಾಣಿ, ನಗರದ ಕ್ಲಾರ್ಕ್ ಟವರ್ ನಲ್ಲಿಯಲ್ಲಿ ಚಂದ್ರ ಆಕೃತಿಯ ನಕ್ಷತ್ರ, ಎಂಜಿ ರಸ್ತೆಯ ಮಸೀದಿ ಬಳಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಂಡು ಒತ್ತಾಯಿಸುತ್ತಾ ಇದ್ದು ಕೂಡಲೇ ತೆರೆವುಗೊಳಿಸಿ ಸಂವಿಧಾನದ ಕಾನೂನು ಪಾಲನೆ ಮಾಡಬೇಕು ಯಾವುದೇ ಧರ್ಮವಾಗಲಿ ಬೇಧಭಾವವನ್ನು ಮಾಡಬಾರದು ಎಂದರು.
ನಗರದ ಕೋಲಾರಮ್ಮ ಮತ್ತು ಸೋಮೇಶ್ವರ ದೇವಾಲಯದ ಸುತ್ತಮುತ್ತಲಿರುವ 100 ಮೀಟರ್ ಒಳಗಿನ ಯಾವುದೇ ಅಕ್ರಮ ಕಟ್ಟಡಗಳನ್ನು ಕಟ್ಟಬಾರದು ಎಂದು ಪ್ರಾಚೀನ ಪುರಾತತ್ವ ಇಲಾಖೆಯ ಆದೇಶವಿದ್ದು, ಕೂಡಲೇ ತೆರೆವುಗೊಳಿಸಿ ಜೊತೆಗೆ ಜಿಲ್ಲೆಯಲ್ಲಿ ದೇವಾಯಗಳ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದರೆ ಕ್ರಮ ವಹಿಸಬೇಕು ಜೊತೆಗೆ ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿ ವರ್ಗದವರು ಮತ್ತು ಜನಪ್ರತಿನಿಧಿಗಳು ಒಂದು ಧರ್ಮದವರನ್ನು ಒಲೈಕೆ ಮಾಡಲು ಹೊರಟಿದ್ದಾರೆ. ಅವರಿಗೆ ಅಂಬೇಡ್ಕರ್ ಸಂವಿಧಾನದ ಕಾನೂನು ಅರಿವಾಗಬೇಕು ಇಲ್ಲದೇ ಹೋದರೆ ಮುಂದೆ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಇದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…