Categories: ಲೇಖನ

ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ….

ವ್ಯವಸ್ಥೆಗಳು,

ನಮಗಾಗಿ, ನಿಮಗಾಗಿ,

ಆದರೂ,…….

ಹೋಮಿಯೋಪತಿ,
ಅಲೋಪತಿ,
ನ್ಯಾಚುರೋಪತಿ,
ಆಯುರ್ವೇದಿಕ್,
ಪ್ರಾಣಿಕ್ ಹೀಲಿಂಗ್,
ಅಕ್ಯುಪಂಕ್ಚರ್,
ಆಕ್ಯುಪ್ರೆಷರ್,
ಮನೆ ಮದ್ದು ……..

ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು.

ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ…….

ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು.

ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು…..

ಎಲ್ಲವೂ ಮನರಂಜನೆ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಕಂಡುಕೊಂಡಿರುವ ಅಭ್ಯಾಸಗಳು,

ಮದುವೆ, ಕುಟುಂಬ, ಮಕ್ಕಳು, ಅಳಿಯಂದಿರು, ಸೊಸೆಯಂದಿರು…..

ಎಲ್ಲವೂ ನಮ್ಮ ಹಿತಾಸಕ್ತಿಗಾಗಿ ನಿರ್ಮಿಸಿಕೊಂಡ ಸಂಬಂಧಗಳು.

ಪೋಲೀಸು, ಮಿಲಿಟರಿ, ಅರೆ ಸೇನಾಪಡೆ, ಗೃಹ ರಕ್ಷಕ ದಳ, ಗಡಿ ಭದ್ರತಾ ಪಡೆ…..

ಎಲ್ಲವೂ ನಮ್ಮ ರಕ್ಷಣೆಗಾಗಿ ಮಾಡಿಕೊಂಡ ವ್ಯವಸ್ಥೆ.

ಶಿಕ್ಷಣ, ತರಬೇತಿ, ಉದ್ಯೋಗ, ವ್ಯಾಪಾರ, ಉತ್ಪಾದನೆ…..

ಎಲ್ಲವೂ ಬದುಕಲು ಕಟ್ಟಿಕೊಂಡ ವ್ಯವಸ್ಥೆ.

ಕಾನೂನು, ಆಡಳಿತ, ಅಧಿಕಾರಿಗಳು, ಲೆಕ್ಕ ಪರಿಶೋಧಕರು…..

ಎಲ್ಲರೂ ನಮ್ಮ ಹಿತಕ್ಕಾಗಿ ಸಕ್ರಿಯವಾಗಿರುವವರು.

ದೇವರು, ಧರ್ಮ, ದೇವಸ್ಥಾನ, ಪೂಜಾರಿಗಳು,…..

ಎಲ್ಲವೂ ನಮ್ಮ ಮಾನಸಿಕ ನೆಮ್ಮದಿಗಾಗಿ ಸೃಷ್ಟಿಸಿರುವ ವ್ಯವಸ್ಥೆಗಳು.

ಮನೆ, ಹೋಟೆಲ್, ಆಶ್ರಯ, ಛತ್ರ, ಮಠ……..

ಎಲ್ಲವೂ ನಮ್ಮ ಸೌಕರ್ಯಕ್ಕಾಗಿ ನಿರ್ಮಿಸಿರುವ ಕಟ್ಟಡಗಳು.

ಬಾವಿ, ಕೆರೆ, ಸೇತುವೆ, ಕಾಲುವೆ, ಜಲಾಶಯ…

ಎಲ್ಲವನ್ನೂ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಲು ನಿರ್ಮಿಸಿರುವ ವ್ಯವಸ್ಥೆಗಳು.

ಹಣ್ಣು, ತರಕಾರಿ, ಬೇಳೆ,
ಸಿರಿ ಧಾನ್ಯಗಳು…….

ಎಲ್ಲವೂ ‌ಆಹಾರಕ್ಕಾಗಿ ಕಂಡುಹಿಡಿದ ವಸ್ತುಗಳು.

ಮಂಡಲ, ತಾಲ್ಲೂಕು, ಜಿಲ್ಲೆ, ರಾಜ್ಯ, ದೇಶ…….

ಎಲ್ಲಾ ವಿಂಗಡನೆಗಳು ತನ್ನ ಸುಖಕ್ಕಾಗಿ ಮಾಡಿರುವ ವ್ಯವಸ್ಥೆಗಳು.

ಬಸ್ಸು, ಕಾರು, ರೈಲು, ವಿಮಾನ, ರಾಕೆಟ್‌…….

ಎಲ್ಲವನ್ನೂ ತನ್ನ ಪ್ರಯಾಣಕ್ಕಾಗಿ ತಯಾರಿಸಿ ಇಟ್ಟುಕೊಂಡಿರುವ ವ್ಯವಸ್ಥೆಗಳು.

ಅಬ್ಬಾ,
ಅಂಕಿ ಸಂಖ್ಯೆಗಳಿಗೆ ನಿಲುಕಲಾರದಷ್ಟು ಅನುಕೂಲಗಳನ್ನು ಮಾಡಿಕೊಂಡು ಮತ್ತು ಮಾಡಿಕೊಳ್ಳುತ್ತಾ ಬದುಕುತ್ತಿದ್ದಾನೆ.

ಆದರೆ……

ನೆಮ್ಮದಿಯ ಬದುಕು ಅವನದಾಗಿಲ್ಲ. ಸ್ವತಂತ್ರ ಜೀವನ ನಡೆಸಲಾಗುತ್ತಿಲ್ಲ.

ಆಸ್ಪತ್ರೆಗಳು, ಪೋಲೀಸ್ ಸ್ಟೇಷನ್ ಗಳು, ನ್ಯಾಯಾಲಯಗಳು, ಸಿಸಿ ಟಿವಿಗಳು ಹೆಚ್ಚುತ್ತಲೇ ಇವೆ.

ಶುದ್ದ ಗಾಳಿ, ಶುದ್ದ ನೀರು, ಶುದ್ದ ಆಹಾರ ಸಿಗುತ್ತಿಲ್ಲ.

ಕಣ್ತುಂಬ ನಿದ್ದೆಗಾಗಿ ಪರದಾಡುವಂತಾಗಿದೆ.

ದೇವಸ್ಥಾಗಳ ಮುಂದೆ ಚಪ್ಪಲಿ ಬಿಟ್ಟು ನೆಮ್ಮದಿಯಿಂದ ಒಳಗೆ ಕೈಮುಗಿಯಲು ಕಷ್ಟವಾಗುತ್ತಿದೆ. ಏಕೆಂದರೆ ಹೊರಗೆ ಬರುವಷ್ಟರಲ್ಲಿ ಚಪ್ಪಲಿ ಮಾಯ. ತಾರಸಿ ಮೇಲಿನ ಬಟ್ಟೆಗಳನ್ನು ಕದಿಯಲಾಗುತ್ತಿದೆ.

ಬಸ್ಸು ರೈಲು ನಿಲ್ದಾಣಗಳಲ್ಲಿ ಕಳ್ಳರಿದ್ದಾರೆ ಎಂಬ ಎಚ್ಚರಿಕೆಯ ಬೋರ್ಡುಗಳು.

ಒಂದು ಸೈಟು, ಮನೆ ಕೊಳ್ಳಲು ಹಲವಾರು ವಂಚನೆಯ ಅನುಮಾನಗಳು.

ಒಂದು ಸಣ್ಣ ಕೆಲಸಕ್ಕೆ ಲಂಚ ನೀಡಬೇಕಾದ ಅನಿವಾರ್ಯತೆ.

ಮದುವೆಗಾಗಿ ವಧು ವರರನ್ನು ಹುಡುಕುವುದೇ ಒಂದು ದೊಡ್ಡ ಸಾಹಸ.

ರಾತ್ರಿ ಹೊತ್ತು ನೆಮ್ಮದಿಯಾಗಿ ಒಂಟಿಯಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ.

ಟಿವಿ ಇಂಟರ್ನೆಟ್ ಎಲ್ಲಾ ‌ಬೆರಳ ತುದಿಯಲ್ಲಿ ಇದ್ದರೂ ಯಾವ ಮಾಹಿತಿ ನಿಜ, ಯಾವುದು ಸುಳ್ಳು ಎಂಬ ಗೊಂದಲ ಎಲ್ಲರಲ್ಲೂ ಇರುತ್ತದೆ.

ಪ್ರತಿ ಕ್ಷಣವೂ ಆತಂಕದಲ್ಲೇ ಬದುಕಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ.

ಎಲ್ಲಾ ಅನುಕೂಲಗಳೂ ಅನಾನುಕೂಲಗಳಾಗಿರುವ ಪರಿಸ್ಥಿತಿಯಲ್ಲಿ ನಾವು ನೀವು.

ಸರಳತೆಯಿಂದ ಸಂಕೀರ್ಣ ಬದುಕಿನತ್ತ ಸಾಗಿದ ನಾವು ಈಗ ಮತ್ತೆ ಸಂಕೀರ್ಣತೆಯಿಂದ ಸರಳತೆಯತ್ತ ಸಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಎಲ್ಲವೂ ಇದ್ದು ಏನೂ ಇಲ್ಲದ ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ ನಮ್ಮ ಸಮಾಜ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

8 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

11 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

11 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago