ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹೆಚ್.ಸಿ. ರುದ್ರಸ್ವಾಮಿ (45ವರ್ಷ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ನೆಲಮಂಗಲ ಮೂಲದ ರುದ್ರಸ್ವಾಮಿ ಅವರು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನೆಲಮಂಗಲ ತಾಲೂಕಿನ ಕುಪ್ಪೇಮಾಳ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತ ರುದ್ರಸ್ವಾಮಿ ಅವರ ಆಪ್ತರ ಮೂಲಗಳಿಂದ ತಿಳಿದು ಬಂದಿದೆ.