ಬೆಂಗಳೂರು ವೈಟ್ ಫೀಲ್ದ್ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್‌ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರು ತಮ್ಮ ವೈದ್ಯಕೀಯ ಅನುಭವದಿಂದಲೇ ಗಂಭೀರತೆಯನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ ಪರಿಣಾಮ, ರೋಗಿಯು ಜೀವಾಪಾಯದಿಂದ ಪಾರಾದ್ದಾರೆ.
ಬಾಬು ಅವರು 30 ದಿನಗಳ ಕಾಲ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದನ್ನು ಸಾಮಾನ್ಯ ಗ್ರಾಸ್ಟ್ರಿಕ್ ಸಮಸ್ಯೆ ಎಂದು ಅನಿಸಿಕೊಂಡಿದ್ದರು. ಅವರು ಚಿಕಿತ್ಸೆಗಾಗಿ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಕೌಶಿಕ್ ಅವರ ಸಲಹೆ ಪಡೆದುಕೊಂಡರು. ಡಾಕ್ಟರ್ ಅವರು ತಕ್ಷಣವೇ ಇತರೆ ಪರೀಕ್ಷೆಗಳನ್ನು ಮಾಡಿಸಿ, ಪಿತ್ತಕೋಶದ ಕ್ಯಾನ್ಸರ್ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು.
ಆದರೆ ಪ್ರಾಥಮಿಕ ಸ್ಕ್ಯಾನ್ ವರದಿಯಲ್ಲಿ ಕ್ಯಾನ್ಸರ್ ಇಲ್ಲವೆನ್ನಲಾಗಿತ್ತು. ನಂತರ ಬಯೋಪ್ಸಿ ನಡೆಸಿದಾಗ ಪಿತ್ತಕೋಶದಲ್ಲಿ ಕ್ಯಾನ್ಸರ್ ಇರುವುದಾಗಿ ದೃಢಪಟ್ಟಿತು. ತಕ್ಷಣವೇ ರೊಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ (ಪಿತ್ತಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕುವುದು) ಮಾಡಲಾಯಿತು. ಕ್ಯಾನ್ಸರ್ ಸ್ವಲ್ಪ ಲಿವರ್‌ಗೂ ಹಬ್ಬಿಕೊಂಡಿದ್ದರಿಂದ, ಲಿವರ್‌ನ ಒಂದು ಭಾಗವನ್ನೂ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು.
ಡಾ. ಕೌಶಿಕ್ ಸುಬ್ರಮಣಿಯನ್ ಅವರು, ಪಿತ್ತಕೋಶ ಸಂಬಂಧಿತ ಕಾಯಿಲೆಗಳಲ್ಲಿ ತಕ್ಷಣದ ತಪಾಸಣೆ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…