ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ  ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಡಾ.ರಾಜ್ ಕುಮಾರ್ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಸವಜಯಂತಿ ಮತ್ತು ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಎಂಬ ಚಿಂತನೆ, ಸಾಮಾಜಿಕ ಹೊಣೆಗಾರಿಕೆ, ಸಮಾನತೆ ಮತ್ತು ಸಹಬಾಳ್ವೆ ಶರಣರ ಪ್ರತಿಪ್ರಪಾದನೆಯಾಗಿದೆ. ಬಸವಣ್ಣನವರ ಪ್ರೇರಣೆಯಿಂದ ಶರಣರು ಸರಳವಾದ, ನೇರ ನಡೆ- ನುಡಿಯ ಜನಸಾಹಿತ್ಯವಾದ ವಚನಸಾಹಿತ್ಯ ರಚನೆಗೆ  ಕಾರಣವಾಯಿತು.

ಬಸವಣ್ಣನವರ ಕಾಯಕತತ್ವ ವಿಶ್ಚಮಾನ್ಯ ಹಾಗೂ ಸಾರ್ವಕಾಲಿಕ ಆದರ್ಶವಾಗಿದೆ. ಅನುಭವ ಮಂಟಪದ ಮೂಲಕ ಪ್ರಜಾಸತ್ತಾತ್ಮಕ ಚಿಂತನೆಗಳಿಗೆ ಅವಕಾಶ ದೊರೆಯಿತು ಎಂದು ಅಭಿಪ್ರಾಯಪಟ್ಟರು.

ಬಿ.ಎಸ್‌.ಎನ್.ಎಲ್. ನಿವೃತ್ತ ನೌಕರರಾದ ನರಸಿಂಹಮೂರ್ತಿ ಮಾತನಾಡಿ,  ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ತ್ರೀ ಸ್ವಾತಂತ್ರ್ಯ ಹಾಗೂ ಲಿಂಗಸಮಾನತೆಗಾಗಿ ನಡೆಸಿದ ಹೋರಾಟ ಅನನ್ಯ. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ನಿವಾರಣೆಗೆ ಬಸವಣ್ಣನವರ ಚಿಂತನೆಗಳು ದಾರಿದೀಪವಾಗಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮಾಜ ಸೇವಕ ಅಬ್ದುಲ್‌ ಸುಭಾನ್ ಸಾಬ್ ರವರನ್ನು ಸನ್ಮಾನಿಸುತ್ತಿರುವು ಶ್ಲಾಘನೀಯ ವಿಚಾರವಾಗಿದೆ. ಕಾಯಕ ನಿಷ್ಠೆಯ ಮೂಲಕ ಅಬ್ದುಲ್‌ ಸುಭಾನ್ ಸಾಬ್ ರವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಜನಪರ ಸಂಘಟನೆಯ ಮುಖಂಡರಾದ ಆರಿಫ್, ಫೀರ್ ಪಾಷಾ, ಶಂಶೀರ್ ಮೊದಲಾದವರು  ಭಾಗವಹಿಸಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

12 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

12 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

13 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

19 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

21 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

24 hours ago