ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ ಸಚಿವ ಸ್ಥಾನ ನೀಡಬೇಕು, ಗೃಹ ಅಥವಾ ಕಂದಾಯ ಇಲಾಖೆಗಳನ್ನು ನಿರ್ವಹಿಸುವ ಶಕ್ತಿ ಇರುವ ಮುನಿಯಪ್ಪನವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನಾದರೂ ನೀಡಬೇಕು ಎಂದು ದೊಡ್ಡಬಳ್ಳಾಪುರ ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನು.ಆರ್.ವಿ ಒತ್ತಾಯ ಮಾಡಿದ್ದಾರೆ.
ಕರ್ನಾಟಕದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಅದಕ್ಕನುಗುಣವಾಗಿ ಮಂತ್ರಿಸ್ಥಾನ ನೀಡಬೇಕು, ಜನಪ್ರಿಯ ಶಾಸಕರು ಹಾಗೂ ಹಿರಿಯರ ಅನುಭವ ಪರಿಗಣಿಸಿ ಪ್ರಬಲವಾದ ಸಚಿವ ಸ್ಥಾನ ನೀಡಬೇಕು. ಎಡಗೈ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ಕೆ.ಎಚ್. ಮುನಿಯಪ್ಪನವರನ್ನು ಉಪಮುಖ್ಯಮಂತ್ರಿಯಾಗಿ ಮಾಡಿ, ಸಮಾಜ ಕಲ್ಯಾಣ ಸಚಿವ ಸ್ಥಾನವನ್ನೂ ನೀಡಬೇಕು ಅವರಿಗೆ ಇರುವ ಅಪಾರ ಅನುಭವವನ್ನು ಡಿ.ಕೆ.ಶಿವಕುಮಾರ್ ಸಂಪುಟ ಬಳಸಿಕೊಳ್ಳಬೇಕೆಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…