ಅನುಮತಿ ಇಲ್ಲದೇ ಶಾಲಾ ಆವರಣದಲ್ಲಿ ಗ್ರಾಮ ಸಭೆ- ಅಧಿಕಾರಿಗಳ ಬೇಜವಾಬ್ಧಾರಿತನದಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿ

ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜನೆ ಮಾಡಲಾಗಿದೆ.

ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿರುವ ಹಿನ್ನೆಲೆ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ರಂಗಪ್ಪ ಪ್ರತಿಕ್ರಿಯಿಸಿ, ಕೂಸಿನ ಮನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಶಾಲಾ ಆವರಣದಲ್ಲಿ ಗ್ರಾಮಸಭೆ ನಡೆಸಲು ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ.ಈ ಕುರಿತು ಶಾಲಾ ಮುಖ್ಯೋಪಾಧ್ಯರಿಂದ ವರದಿ ಪಡೆದುಕೊಂಡು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಗ್ರಾಮ ಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು, ತಾಲೂಕು‌ ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜು, ಪಿಡಿಒ ನಂದಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಧ್ವನಿವರ್ಧಕದಿಂದ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗಿತ್ತು.

Ramesh Babu

Journalist

Recent Posts

ರಾಮನಗರ, ಕನಕಪುರಕ್ಕೆ ಮಾತ್ರ ಡಿಕೆಶಿ ಸಿಎಂ – ಆರ್. ಅಶೋಕ್: ‘ಕೈ’ ಸರ್ಕಾರ ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡು ಅಧಿಕಾರ ನಡೆಸುತ್ತಿದೆ – ಬಿ.ವೈ ವಿಜಯೇಂದ್ರ ಆರೋಪ

ದೊಡ್ಡಬಳ್ಳಾಪುರ: ಕನಕಪುರದಲ್ಲಿ ಮಾತ್ರ ರೈತರಿಗೆ ಭೂಮಿಯನ್ನು ಮಾರಾಟ ಮಾಡಬೇಡಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ಬಿಡದಿ, ದೊಡ್ಡಬಳ್ಳಾಪುರ…

3 hours ago

ದೊಡ್ಡಬಳ್ಳಾಪುರ: ಕಾರು–ಬೈಕ್ ಭೀಕರ ಅಪಘಾತ; ದಂಪತಿ ಸಾವು

ದೊಡ್ಡಬಳ್ಳಾಪುರ: ನಾಗಸಂದ್ರ ಸಮೀಪದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ…

10 hours ago

ಮಂಕುಹಿಡಿದ ‘ಮಾಂಗಲ್ಯ ಭಾಗ್ಯ’ ಯೋಜನೆ: ಬಡ ಜೋಡಿಗಳ ಪಾಲಿಗೆ ಮರೀಚಿಕೆಯಾದ ಮಾಂಗಲ್ಯ ಭಾಗ್ಯ ಕಾರ್ಯಕ್ರಮ

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮದುವೆ ವೆಚ್ಚದ ಹೊರೆಯನ್ನು ತಗ್ಗಿಸಿ, ಆರ್ಥಿಕವಾಗಿ ಹಿಂದುಳಿದ ವಧು-ವರರಿಗೆ ಆಸರೆಯಾಗಿದ್ದ ರಾಜ್ಯ ಸರ್ಕಾರದ…

11 hours ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುಮಾರು 8.38 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್‌, ಬ್ಯಾಂಕಾಕ್‌ನಿಂದ…

21 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.95.94 ರಷ್ಟು ಮತದಾನ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದಿದ್ದು, ಶೇಕಡ…

24 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವಿನ ವಿಶ್ವಾಸ: ಕೆಸ್ತೂರು ರಮೇಶ್

ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದು, ಅವರ ಪರವಾಗಿ ಎನ್‌ಡಿಎ ನಾಯಕರು, ಮುಖಂಡರು…

1 day ago