ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.
ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮೃತದೇಹದ ಪಕ್ಕದಲ್ಲೇ ವಿಷದ ಬಾಟಲಿಗಳು ಪತ್ತೆಯಾಗಿರುವುದರಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರು ಮೃತದೇಹವನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತ ಮಹಿಳೆ ಯಾರು, ಯಾವ ಊರಿನವರು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಗುರುತು ಪತ್ತೆ ಹಾಗೂ ಸಾವಿನ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…