ಅನುಮಾನಾಸ್ಪದವಾಗಿ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಜೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗುಂಜೂರು ಗ್ರಾಮದ ಚೌಡಮ್ಮ (70), ಸಾವನ್ನಪ್ಪಿರುವ ವೃದ್ಧೆ.
ತಲೆ ಹಾಗೂ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಗಾಯದ ಗುರುತುಗಳು ಇರುವ ಹಿನ್ನೆಲೆ ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ದೂರಿನ ಮೇರೆಗೆ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.